Saturday, April 27, 2024
spot_imgspot_img
spot_imgspot_img

ಕಡಲ ನಗರಿಯಲ್ಲಿ ಹಾಡಹಗಲೇ ಶೂಟೌಟ್; ಕೆಲಸದಾಳಿಗೆ ಹಾರಿಸಿದ ಗುಂಡು ತನ್ನ ಮಗನ ಜೀವಕ್ಕೆ ಕುತ್ತು

- Advertisement -G L Acharya panikkar
- Advertisement -
driving

ಮಂಗಳೂರು: ಉದ್ಯಮಿಯೊಬ್ಬರು ಕೆಲಸದಾಳಿಗೆ ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದಿರುವ ಘಟನೆ ನಗರದ ಮೋರ್ಗನ್ ಗೇಟ್ ಬಳಿ ಮಂಗಳವಾರ ಸಂಭವಿಸಿದೆ.

ವೈ ಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ಸಂಭವಿಸಿದ್ದು, ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದರು. ಈ ವೇಳೆ ವಾಗ್ವಾದ ನಡೆದು ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಕೆಲಸದಾಳು ಮೇಲೆ ಗುಂಡು ಹಾರಿಸಿದ್ದಾರೆ.

ಆ ಗುಂಡು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದು ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!