Monday, June 30, 2025
spot_imgspot_img
spot_imgspot_img

ಕತಾರ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ಯುವಕ ಮೃತ್ಯು

- Advertisement -
- Advertisement -

ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ.

ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ. ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ.

ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.ಫಹದ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!