Friday, April 26, 2024
spot_imgspot_img
spot_imgspot_img

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಇನ್ನಿಲ್ಲ ….!!

- Advertisement -G L Acharya panikkar
- Advertisement -

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ ಅವರು ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಯಿಂದ ಎರಡು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಸೋಮವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಡಾ ರಾಜ್ ಕುಮಾರ್ ಅವರ ಬಹುತೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿ ಹಲವು ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಮತ್ತೊಬ್ಬ ಖ್ಯಾತ ನಿರ್ದೇಶಕ ದೊರೈರಾಜ್ ಮತ್ತು ಭಗವಾನ್ ಜೋಡಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದ್ದರು.

ಭಗವಾನ್‌ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದೊರೆ–ಭಗವಾನ್‌ ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿತ್ತು. ‘ಜೇಡರ ಬಲೆ’ ದೊರೆ–ಭಗವಾನ್‌ ಜೋಡಿಯ ನಿರ್ದೇಶನದ ಮೊದಲ ಸಿನಿಮಾ. ‘ಗೋವಾದಲ್ಲಿ ಸಿ.ಐ.ಡಿ 99’, ‘ಆಪರೇಷನ್‌ ಡೈಮಂಡ್‌ ರಾಕೆಟ್‌’,‘ ಆಪರೇಷನ್‌ ಜಾಕ್‌ಪಾಟ್‌ನಲ್ಲಿ ಸಿ.ಐ.ಡಿ 999’, ‘ಗಿರಿಕನ್ಯೆ ’, ‘ಎರಡು ಕನಸು’, ‘ನಾನೊಬ್ಬ ಕಳ್ಳ’ ಹೀಗೆ ರಾಜ್‌ಕುಮಾರ್‌ ಅವರ 32 ಚಿತ್ರಗಳಿಗೆ ನಿರ್ದೇಶಕರಾಗಿ ಭಗವಾನ್‌ ಕಾರ್ಯನಿರ್ವಹಿಸಿದ್ದರು. ‘ಚಂದನದ ಗೊಂಬೆ’, ‘ಮುನಿಯನ ಮಾದರಿ’, ‘ಗಾಳಿ ಮಾತು’, ‘ಕಸ್ತೂರಿ ನಿವಾಸ’, ಹೊಸ ಬೆಳಕು ಮುಂತಾದುವುಗಳು ಅವರ ಇತರೆ ಸಿನಿಮಾಗಳು.

- Advertisement -

Related news

error: Content is protected !!