Saturday, April 27, 2024
spot_imgspot_img
spot_imgspot_img

ಕಮಲ ಪಕ್ಷದ ಧ್ವಜ ಹಿಡಿದ ಪ್ರಭಾವಿ ಜನನಾಯಕ.?

- Advertisement -G L Acharya panikkar
- Advertisement -

ಉತ್ತರ ಕರ್ನಾಟಕದ ಪುಭಾವಿ ಲಿಂಗಾಯತ ನಾಯಕ ಹಾಗೂ 2 ದಶಕಗಳಿಂದ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಜನತಾ ಪರಿವಾರದ ಹಿರಿಯರಲ್ಲಿ ಒಬ್ಬರಾದ ಬಸವರಾಜ ಹೊರಟ್ಟಿ ಅವರು ಕೊನೆಗೂ ಕಮಲ ಪಕ್ಷದ ಧ್ವಜ ಹಿಡಿದಿದ್ದಾರೆ.

ಕೆಲವೇ ದಿನಗಳಲ್ಲಿ, ಅವರು ಬಿಜೆಪಿಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಯಲ್ಲಿ ಆ ಪಕ್ಷದ ಪರವಾಗಿ ನಾಮಪತ್ರ ಸಲ್ಲಿಸುವುದು ಬಹುತೇಕ ಖಚಿತವಾಗಿದೆ. 75 ವರ್ಷ ವಯಸ್ಸಾದವರಿಗೆ ಬಿಜೆಪಿಯಲ್ಲಿ ಕಡ್ಡಾಯವಾಗಿ ನಿವೃತ್ತಿ ನೀಡುತ್ತಿದ್ದರೂ ಪ್ರಭಾವಿ ನಾಯಕ ಹೊರಟ್ಟಿ ಅವರಿಗೆ ಮಾತ್ರ ಆ ನಿಯಮ ಅಡ್ಡಿ ಬಾರದು.

ಉತ್ತರ ಕರ್ನಾಟಕದ ಬಲಾಡ್ಯ, ಜೆಡಿಎಸ್ ನಾಯಕ ಹಾಗೂ ವಿಧಾನಪರಿಷತ್ ಸಭಾಪತಿಯಾಗಿದ್ದ ಹೊರಟ್ಟಿ ಕೊನೆಗೂ ಬುಧವಾರದಂದು ಬೆಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಸೇರಿದ್ದಾರೆ. ಬಿಜೆಪಿ ಹೊರಟ್ಟಿಯವರಿಗೆ ಟಿಕೆಟ್ ನೀಡುವ ಭರವಸೆ ವ್ಯಕ್ತಪಡಿಸಿರುವುದರಿಂದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊರಟ್ಟಿಯವರಿಗೆ ಕಮಲ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಹಲವು ತಿಂಗಳ ಪರಿಶ್ರಮದ ಫಲವಾಗಿ ಇದೀಗ ಬಸವರಾಜ ಹೊರಟ್ಟಿ, ಕಮಲ ಪಕ್ಷದ ಪಾಲಾಗಿದ್ದಾರೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ, ರವಿ, ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಸಿ.ಸಿ.ಪಾಟೀಲ್ ಅವರು ಹೊರಟ್ಟಿ ಅವರು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!