- Advertisement -
- Advertisement -



ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಎ.20 ಮತ್ತು 21 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯಾಗುವ ನಿರೀಕ್ಷೆ ಇದೆ.
ದ.ಕ. ಜಿಲ್ಲೆಯಲ್ಲಿ ಸೋಮವಾರ ಉರಿ ಬಿಸಿಲು ಮತ್ತು ಸೆಕೆಯಿಂದ ಕೂಡಿತ್ತು. ಬೆಳಗ್ಗಿನ ವೇಳೆ ಮೋಡದ ವಾತಾವರಣ ಇತ್ತು. ಐಎಂಡಿ ಮಾಹಿತಿಯಂತೆ ಮಂಗಳೂರಿನಲ್ಲಿ 35.3 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚಿತ್ತು. 27.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2 ಡಿ.ಸೆ. ಹೆಚ್ಚಿತ್ತು.
- Advertisement -