Saturday, May 18, 2024
spot_imgspot_img
spot_imgspot_img

ಕರಾವಳಿಯಲ್ಲಿ ನ.20ರ ವರೆಗೆ ಭಾರೀ ಮಳೆ ಸಾಧ್ಯತೆ.!

- Advertisement -G L Acharya panikkar
- Advertisement -

vtv vitla
vtv vitla

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 20ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಎಲ್ಲಾ ಕರಾವಳಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ (Yellow Alert) ನೀಡಲಾಗಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಶುಕ್ರವಾರ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು ಮತ್ತು ಕೊಪ್ಪಳಕ್ಕೆ ಹಳದಿ ಅಲರ್ಟ್ ನೀಡಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಪಶ್ಚಿಮಘಟ್ಟದ ಜಿಲ್ಲೆಗಳಿಗೆ ಇಂದು ಮತ್ತು ಶುಕ್ರವಾರ ಹಳದಿ ಅಲರ್ಟ್​ ನೀಡಲಾಗಿದೆ. ಇದಲ್ಲದೆ, ಶನಿವಾರ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

vtv vitla
- Advertisement -

Related news

error: Content is protected !!