Thursday, March 28, 2024
spot_imgspot_img
spot_imgspot_img

ಕರಾವಳಿಯಲ್ಲಿ ಭಾರೀ ಇಳಿಕೆ ಕಂಡ ಕೋಳಿ ಮಾಂಸ, ಮೊಟ್ಟೆ ದರ..!!

- Advertisement -G L Acharya panikkar
- Advertisement -

ಕರಾವಳಿಯಲ್ಲಿ ಗಗನಕ್ಕೇರಿದ್ದ ಕೋಳಿ ಮಾಂಸದ ದರ ತೀವ್ರ ಕುಸಿತ ಕಂಡಿದ್ದು, ಮೊಟ್ಟೆ ಬೆಲೆಯೂ ಇಳಿದಿದೆ. 10 ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಬ್ರಾಯ್ಲರ್‌ ಕೋಳಿ ಮಾಂಸ ಸ್ಕಿನ್‌ಲೆಸ್‌ ಕೆಜಿಗೆ 240 ರೂ. ಇತ್ತು. ವಿತ್‌ಸ್ಕಿನ್‌ ಕೆ.ಜಿ.ಗೆ 220 ರೂ. ಹಾಗೂ ಜೀವಂತ ಕೋಳಿ 180 ರೂ. ವರೆಗೆ ಇತ್ತು. ಜು. 24ರಂದು ಸ್ಕಿನ್‌ಲೆಸ್‌ ಕೆಜಿಗೆ 155 ರೂ. ಇದ್ದರೆ ವಿತ್‌ಸ್ಕಿನ್‌ 135 ರೂ. ಆಸುಪಾಸಿನಲ್ಲಿದೆ. ಜೀವಂತ ಕೋಳಿ ಕೆಜಿಗೆ 105 ರೂ. ವರೆಗೆ ಕುಸಿದಿದೆ. 6.50 ರೂ.ಗೆ ಮಾರಾಟವಾಗುತ್ತಿದ್ದ ಮೊಟ್ಟೆ ಮೊಟ್ಟೆಯ ದರವೂ ಇಳಿದಿದ್ದು 5.50 ರೂ.ಗೆ ಇಳಿದಿದೆ. ವಾರದಲ್ಲಿ ಮತ್ತಷ್ಟು ಕುಸಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಬೇಸಗೆಯಲ್ಲಿ ಮದುವೆ, ಕೋಲ, ತಂಬಿಲ ಸಹಿತ ಶುಭ ಕಾರ್ಯಗಳ ಸಂದರ್ಭ ಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಿರುವ ಕಾರಣ ದರವೂ ವಿಪರೀತ ಏರಿಕೆೆಯಾಗುತ್ತದೆ. ಮಳೆಗಾಲ ಆರಂಭಗೊಂಡು ಆಷಾಢ ಬರುತ್ತಿದ್ದಂತೆಯೇ ದರ ಇಳಿಯುವುದು ಸಾಮಾನ್ಯ. ಮುಂದೆ ಶ್ರಾವಣ ಮಾಸ ಬರುವುದರಿಂದ ಇಡೀ ರಾಜ್ಯದಲ್ಲಿ ಕೋಳಿಯ ದರ ಕಡಿಮೆಯಾಗುತ್ತದೆ. ಈಗ ಮಾರುಕಟ್ಟೆಯಲ್ಲಿ ತಾಜಾ ಮೀನು ಕೂಡ ಸಿಗುತ್ತಿರುವುದರಿಂದ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆ. ದರ ಏರಿಕೆಗೆ ಡಿಸೆಂಬರ್‌ ವರೆಗೆ ಕಾಯಬೇಕು ಎನ್ನುತ್ತಾರೆ ಕೋಳಿ ವ್ಯಾಪಾರಿಗಳು.

ಕೋಳಿ ಮತ್ತು ಕೋಳಿ ಮಾಂಸಕ್ಕೆ ಬೆಂಗಳೂರು, ಮೈಸೂರು, ಕರಾವಳಿ ಜಿಲ್ಲೆಯಲ್ಲಿ ಭಾರೀ ಬೇಡಿಕೆ. ಉಡುಪಿ ಜಿಲ್ಲೆಯ ಬೇಡಿಕೆಯ ಬಹುಪಾಲು ಹುಬ್ಬಳ್ಳಿ, ಹಾಸನ, ಬೆಂಗಳೂರು, ತಮಿಳುನಾಡು, ದಾವಣಗೆರೆ ಜಿಲ್ಲೆಗಳಿಂದ ಪೂರೈಕೆಯಾಗುತ್ತದೆ. ಮಾರುಕಟ್ಟೆಯಲ್ಲಿ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆಯಾದಾಗ ಬೆಲೆ ಇಳಿಸುತ್ತಾರೆ. ಬೇಡಿಕೆ ಹೆಚ್ಚಾದಾಗ ಬೆಲೆ ಹೆಚ್ಚಿಸುತ್ತಾರೆ. ಮಾಂಸ ಮತ್ತು ಮೊಟ್ಟೆಯ ದರ ಪ್ರತೀ ದಿನ ಬದಲಾಗುತ್ತಿರುತ್ತದೆ. ಕೆಲವೊಮ್ಮೆ ಕೋಳಿ ದರ ವಿಪರೀತ ಇಳಿದಾಗ ಅದು ಸಣ್ಣ ವ್ಯಾಪಾರಿಗಳಿಗೆ ಸಂಕಷ್ಟವನ್ನುಂಟು ಮಾಡುತ್ತದೆ ಎಂಬುದು ವ್ಯಾಪಾರಿಗಳ ಅಭಿಪ್ರಾಯ. ,ಕೋಳಿ ಸಾಕಾಣಿಕೆಗೆ ಪ್ರತೀ ಕೆಜಿಗೆ 100 ರೂ.ಗೂ ಅಧಿಕ ವೆಚ್ಚ ತಗಲುತ್ತದೆ. ಕೋಳಿ ಆಹಾರದ ಬೆಲೆಯೂ ಹೆಚ್ಚಾಗಿರುವುದಲ್ಲದೆ ಅದರ ತಯಾರಿಗೆ ಬಳಸುವ ಕಚ್ಚಾ ಪದಾರ್ಥಗಳಾದ ಮೆಕ್ಕೆ ಜೋಳ, ಸೋಯಾ, ಅಕ್ಕಿ ಎಣ್ಣೆ ಬೆಲೆಯೂ ಹೆಚ್ಚಾಗಿರುವ ಕಾರಣ ನಿರ್ವಹಣ ವೆಚ್ಚ ಹೆಚ್ಚಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!