Thursday, May 9, 2024
spot_imgspot_img
spot_imgspot_img

ಕರಾವಳಿಯಲ್ಲಿ ಮತ್ತೆ ಗ್ಯಾಂಗ್ ವಾರ್; ಓರ್ವ ಗಂಭೀರ..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ಕರಾವಳಿಯಲ್ಲಿ ಮತ್ತೆ ಗ್ಯಾಂಗ್ ವಾರ್ ನಡೆದಿದ್ದು, ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣಾಮ ಯುವಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಗೊಂಡ ಯುವಕ ಶ್ರವಣ್ ಎನ್ನಲಾಗಿದೆ.

vtv vitla
vtv vitla

ಎಂಟು ಜನರ ತಂಡವೊಂದು ಮಾರಾಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ನಡೆಸಿದ್ದು ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

vtv vitla

ಘಟನೆಯ ವಿವರ:
2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 8 ಮಂದಿಯ ತಂಡವೊಂದು ಈ ದುಷ್ಕೃತ್ಯ ಎಸಗಿದೆ. ಗಾಯಾಳು ಪರಿಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆರಂಭದಲ್ಲಿ ಇದೊಂದು ಕೊಲೆಯತ್ನ ಎಂದು ಭಾವಿಸಲಾಗಿತ್ತು. ಆದರೆ ಈಗ ಗ್ಯಾಂಗ್ ವಾರ್ ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. ಈ ಘಟನೆ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

vtv vitla
vtv vitla
vtv vitla
- Advertisement -

Related news

error: Content is protected !!