Thursday, April 25, 2024
spot_imgspot_img
spot_imgspot_img

ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ; ಆತಂಕದಲ್ಲಿ ಜನ

- Advertisement -G L Acharya panikkar
- Advertisement -

ಮಂಗಳೂರು: ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಬಜಪೆ ಪರಿಸರದಲ್ಲಿ ವ್ಯಾಪಕವಾಗಿದೆ.

ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ, ಶಾಲೆ, ಆಸ್ಪತ್ರೆ, ಮಾರ್ಕೆಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಕಾಯಿಲೆ ಇದ್ದ ವ್ಯಕ್ತಿಯಿಂದ ಇತರರಿಗೂ ಹಬ್ಬುತ್ತಿದೆ.

ಇನ್ನು ಮಿದುಳು ಜ್ವರ ಲಸಿಕೆಯ ಸರ್ವೇಗೆಂದು ಮನೆ ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರಲ್ಲಿಯೂ ಜ್ವರ ಕಾಣಿಸಿಕೊಳ್ಳುತ್ತಿದೆ. ತಿಂಗಳ ಚುಚ್ಚುಮದ್ದಿಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವ ಕೆಂಗಣ್ಣು ಕಾಯಿಲೆ ಇರುವ ತಾಯಿ-ಮಕ್ಕಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಾಪಾಸ್ ಕಳುಹಿಸಲಾಗುತ್ತಿದ್ದು , ಒಂದು ವಾರ ಬಿಟ್ಟು ಬರುವಂತೆ ಹೇಳಲಾಗುತ್ತಿದೆ. ಇನ್ನು ಡಿ.೫ರಿಂದ ಮಕ್ಕಳಿಗೆ ಮಿದುಳು ಜ್ವರ ವಿರುದ್ಧ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ.

vtv vitla

- Advertisement -

Related news

error: Content is protected !!