Thursday, April 25, 2024
spot_imgspot_img
spot_imgspot_img

ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಕುಚಲಕ್ಕಿ ಭಾಗ್ಯ; ನಿಯೋಗದ ಪ್ರಸ್ತಾವನೆಗೆ ಸಿಎಂ ಸಮ್ಮತಿ

- Advertisement -G L Acharya panikkar
- Advertisement -

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.


ರಾಜ್ಯ ಬಿಜೆಪಿ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ಕುಮಾರ್ ಕೊಡ್ಗಿ ಅವರು ಸೆ.೧೫ರಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದು ಈ ಬಗ್ಗೆ ಮುಖ್ಯಮಂತ್ರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ.


ಈ ಯೋಜನೆ ಅನುಷ್ಟಾನದಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕುಟಿಂಬಗಳಿಗೆ ಅನುಕೂಲವಾಗಲಿದ್ದು, ನಿಯೋಗದ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಸಮ್ಮತಿಸಿದಕ್ಕಾಗಿ ಅವರಿಗೆ ಕರಾವಳಿಗರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ನಳಿನ್ ಕುಮಾರ್ ಕಟೀಲ್ ಹೇಳಿದರು.

vtv vitla
- Advertisement -

Related news

error: Content is protected !!