- Advertisement -
- Advertisement -



ರಾಜ್ಯದ ಬಹುತೇಕ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣಕನ್ನಡ ಮತ್ತು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಧಾರವಾಡ, ಬೆಳಗಾವಿ, ಹಾವೇರಿ, ಕೊಪ್ಪಳ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



- Advertisement -








