Friday, April 26, 2024
spot_imgspot_img
spot_imgspot_img

ಕರಾವಳಿ ತೀರದಲ್ಲಿ ಹೈ ಆಲರ್ಟ್; ವಿದೇಶಿ ಬೋಟ್‌, ಎಕೆ-47 ರೈಫಲ್‌ಗಳು, ಬುಲೆಟ್‌, ಶಸ್ತ್ರಾಸ್ತ್ರಗಳು ಪತ್ತೆ – ಹಲವು ಅನುಮಾನ.!!

- Advertisement -G L Acharya panikkar
- Advertisement -

ಮುಂಬೈನಲ್ಲಿ ಗಣೇಶೋತ್ಸವ ಭರ್ಜರಿಯಾಗಿ, ಅದ್ಧೂರಿಯಾಗಿ ನಡೆಯುತ್ತದೆ. ಇನ್ನೇನು ಹಬ್ಬಕ್ಕೆ 10 ದಿನಗಳು ಬಾಕಿ ಇವೆ. ಇದರ ನಡುವೆಯೇ ಮಹಾರಾಷ್ಟ್ರದ ಜನತೆ ಬೆಚ್ಚಿಬೀಳುವ ಘಟನೆ ನಡೆದಿದೆ.

ಎರಡು ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಬೋಟ್​ಗಳಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಮಹಾರಾಷ್ಟ್ರದ ರಾಯಗಢದ ಸಮುದ್ರದಲ್ಲಿ ಹರಿಹರೇಶ್ವರ ಬೀಚ್ ಬಳಿ ಬೋಟ್‌ನಲ್ಲಿ ಎಕೆ-47 ರೈಫಲ್‌ಗಳು, ಕೆಲವು ಬುಲೆಟ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಮುಂಬೈನಿಂದ 190 ಕಿಮೀ ದೂರದಲ್ಲಿರುವ ಬೋಟ್‌ನಲ್ಲಿ ಯಾವುದೇ ಸಿಬ್ಬಂದಿ ಇಲ್ಲದನ್ನು ಕೆಲವು ಸ್ಥಳೀಯರು ಗಮನಿಸಿ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ. ಆಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕರಾವಳಿ ತೀರದಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಗಣೇಶೋತ್ಸವವನ್ನೇ ಟಾರ್ಗೆಟ್​ ಮಾಡಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಮುಂದಾಗಿದ್ದರೆ ಎನ್ನುವ ಸಂದೇಹವನ್ನು ತನಿಖಾಧಿಕಾರಿಗಳು ವ್ಯಕ್ತಪಡಿಸುತ್ತಿದ್ದಾರೆ. ದೋಣಿ ಪತ್ತೆಯಾಗಿರುವ ಪ್ರದೇಶ ಮುಂಬೈನಿಂದ 200 ಕಿಲೋ ಮೀಟರ್​ ಹಾಗೂ ಪುಣೆಯಿಂದ 170 ಕಿಲೋ ಮೀಟರ್ ದೂರದಲ್ಲಿದೆ. ಮಹಾರಾಷ್ಟ್ರದಲ್ಲಿ ಮುಂದಿನ ಕೆಲವು ದಿನಗಳಲ್ಲಿ ನಿರಂತರವಾಗಿ ಹಬ್ಬಗಳು ಬರಲಿದ್ದು ಇದರ ಬೆನ್ನಲ್ಲೇ ಘಟನೆ ನಡೆದಿರುವುದು ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

- Advertisement -

Related news

error: Content is protected !!