Monday, May 6, 2024
spot_imgspot_img
spot_imgspot_img

ಕರಾವಳಿ ಭಾಗದಲ್ಲಿ ಮತ್ತೆ ಮಳೆ.! ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

- Advertisement -G L Acharya panikkar
- Advertisement -

ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಅಕ್ಟೋಬರ್‌ 29 ಮತ್ತು 30ರಂದು ಹಿಂಗಾರು ಮಾರುತಗಳು ಪ್ರಬಲವಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 1ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್​29 ಮಳೆಯ ಅಬ್ಬರ , ಕಡಿಮೆ. ಆದರೆ ಅಕ್ಟೋಬರ್​ 30, ಅಕ್ಟೋಬರ್​ 31, ನವೆಂಬರ್​ 1ರಂದು ಈ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್​ 30ರವೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಿತ್ತು. ಆದರೆ ಹವಮಾನ ಬದಲಾವಣೆಯಿಂದ ಇಂದು ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ ಇಂದು ಹವಮಾನ ಇಲಾಖೆ ತಿಳಿಸಿದೆ. ಕೆಲ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಇದೇ ವಾತಾವರಣ ಭಾನುವಾರದ ವರೆಗೂ ಮುಂದುವರೆಯಲಿದೆ. ಆದರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಸಣ್ಣ ಮಳೆಯಾಗುತ್ತೆ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ ಬೆಂಗಳೂರಿನಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನ ಇರಲಿದೆ. ಇಂದು ಸಂಜೆ ವೇಳೆಗೆ ಮಳೆರಾಯ ಎಂಟ್ರಿಕೊಡುವ ಸಾಧ್ಯತೆಯಿದೆ. ನಾಳೆಯೂ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ.

- Advertisement -

Related news

error: Content is protected !!