Sunday, May 19, 2024
spot_imgspot_img
spot_imgspot_img

ಕರಾವಳಿ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ; ಎಲ್ಲೊ ಅಲರ್ಟ್ ಘೋಷಣೆ

- Advertisement -G L Acharya panikkar
- Advertisement -

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಇಂದಿನಿಂದ ಎರಡು ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದ್ದು ಎಲ್ಲೊ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಈ ನಡುವೆ ತಮಿಳುನಾಡಿನಲ್ಲಿ ಮುಂದಿನ ಎರಡು ವಾರಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. ಆಂಧ್ರ, ಕೇರಳ, ಪುದುಚೆರಿಗಳಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

- Advertisement -

Related news

error: Content is protected !!