Friday, April 26, 2024
spot_imgspot_img
spot_imgspot_img

ಕರಾವಳಿ ಸೇರಿ ಹಲವೆಡೆ ನ.28ರವರೆಗೂ ವ್ಯಾಪಕ ಮಳೆ; ಮತ್ತೊಂದು ಚಂಡಮಾರುತದ ಭೀತಿ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಚಳಿಗಾಲ (Winter) ಶುರುವಾದರೂ ಮಳೆಗಾಲ ಮಾತ್ರ ಮುಗಿದಿಲ್ಲ. ಅಕಾಲದಲ್ಲಿ ಸುರಿಯುತ್ತಿರುವ ಮಳೆಯಿಂದ ರೈತರು (Farmers) ಕಂಗಾಲಾಗಿದ್ದಾರೆ. ವಿಪರೀತ ಮಳೆಯ (Heavy Rain) ಆರ್ಭಟದಿಂದ ತರಕಾರಿಗಳ ಬೆಲೆಯೂ (Vegitables Price) ಹೆಚ್ಚಾಗಿದೆ. ರಾಜ್ಯಾದ್ಯಂತ ನವೆಂಬರ್ 28ರವರೆಗೂ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕ, ಕೇರಳ, ಮಾಹೆ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಈ ಅವಧಿಯಲ್ಲಿ ಕರಾವಳಿ ಕರ್ನಾಟಕದಲ್ಲಿಯೂ ಸಹ ಭಾರೀ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 26ರವರೆಗೆ ಬೆಳಗಳೂರಿನಲ್ಲಿ ಮಳೆಯಾಗಲಿದೆ. ಮುಂದಿನ 4 ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್​ನಲ್ಲಿ ಮಳೆಯಾಗಲಿದೆ. ಇಂದು ಮತ್ತು ನಾಳೆ ಕೇರಳ ಮತ್ತು ಮಾಹೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ದಕ್ಷಿಣ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಮತ್ತು ಅಕ್ಕಪಕ್ಕದ ಪ್ರದೇಶಗಳು ಸಾಕ್ಷಿಯಾಗಿವೆ. ಮಳೆ-ಸಂಬಂಧಿತ ಘಟನೆಗಳಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳು ಮತ್ತು ಸಾವುನೋವುಗಳು. ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಮುಂದಿನ 4 ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮತ್ತೊಂದು ಚಂಡಮಾರುತದ ಭೀತಿ:
ನವೆಂಬರ್ 29ಕ್ಕೆ ಕರ್ನಾಟಕದಲ್ಲಿ ಮತ್ತೊಂದು ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರಗೊಳ್ಳಲಿದೆ. ಹೀಗಾಗಿ, ಇನ್ನೂ 4 ದಿನ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕರ್ನಾಟಕವೂ ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರೆಯಲಿದೆ. ಈ ತಿಂಗಳ 29ರವರೆಗೂ ಕರ್ನಾಟಕದ ಹಲವೆಡೆ ಮಳೆ ಮುಂದುವರಿಯಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ದುರ್ಬಲಗೊಂಡಿರುವುದರಿಂದ ಮಳೆ ತಗ್ಗಿದೆ. ನ. 26ರವರೆಗೂ ಮಳೆ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಂದು ಒಂದೆರಡು ಕಡೆ ಮಳೆಯಾಗಬಹುದು. ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ನ. 26ರ ನಂತರ ವಾಯುಭಾರ ಕುಸಿತವಾಗಲಿದೆ.

ನವೆಂಬರ್ 26ರಿಂದ ಡಿಸೆಂಬರ್ 15ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ತಮಿಳು‌ನಾಡು, ಆಂಧ್ರಪ್ರದೇಶದಲ್ಲಿ‌ ಭಾರೀ ಮಳೆಯಾಗಲಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು, ಕೇರಳ, ಆಂಧ್ರ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಚೆನ್ನೈ, ನೆಲ್ಲೂರಿನಲ್ಲಿ‌ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆ ರಾಜ್ಯಗಳಲ್ಲಿ ಮಳೆ ಹಿನ್ನೆಲೆ ನವೆಂಬರ್ 26ರಿಂದ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಇಂದಿನಿಂದ 4 ದಿನ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ 4 ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

vtv vitla
vtv vitla
- Advertisement -

Related news

error: Content is protected !!