Friday, April 19, 2024
spot_imgspot_img
spot_imgspot_img

ಕರ್ನಾಟಕಕ್ಕೆ ನಾಳೆಯಿಂದ ಹಿಂಗಾರು ಪ್ರವೇಶ

- Advertisement -G L Acharya panikkar
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದಲ್ಲೇ ಮುಂಗಾರು ಮುಕ್ತಾಯವಾಗಿದೆ. ಆದರೆ, ಚಂಡಮಾರುತ ಮತ್ತು ವಾಯುಭಾರ ಕುಸಿತದಿಂದಾಗಿ ಮಳೆ ಮುಂದುವರೆದಿತ್ತು. ಇದೀಗ 2 ದಿನಗಳಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೆ, ನಾಳೆಯಿಂದ ಕರ್ನಾಟಕಕ್ಕೆ ಹಿಂಗಾರು ಪ್ರವೇಶವಾಗುವ ಹಿನ್ನೆಲೆಯಲ್ಲಿ ಮತ್ತೆ ಮಳೆಯಾಗಲಿದೆ. ಅ. 21ರಿಂದ 23ರವರೆಗೆ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದು, ಅ. 21ರಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಹಳದಿ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕಲಬುರ್ಗಿ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಅ. 21ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮತ್ತೆ ಮಳೆ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ಪ್ರವೇಶದ ಲಕ್ಷಣಗಳು ಕಂಡುಬಂದಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರಿನಿಂದ ಎರಡು ವಾರಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗಿತ್ತು. ಬೆಂಗಳೂರಿನಲ್ಲಿ ನಿನ್ನೆ ಕೂಡ ಮಳೆಯಾಗಿದ್ದು, ಹಲವೆಡೆ ಸುಮಾರು 2 ಗಂಟೆ ಮಳೆ ಸುರಿದಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 21ರಿಂದ ಮತ್ತೆ ಮಳೆಯ ಪ್ರಮಾಣ ಹೆಚ್ಚಲಿದ್ದು, ಹಿಂಗಾರು ಮಳೆ ರಾಜ್ಯವನ್ನು ಪ್ರವೇಶಿಸಲಿದೆ.

ಅತ್ತ ಕೇರಳ, ಪಶ್ಚಿಮ ಬಂಗಾಳ, ಉತ್ತರಾಖಂಡದಲ್ಲಿ ವಿಪರೀತ ಮಳೆಯಾಗಿ ಪ್ರವಾಹ ಉಂಟಾಗಿದೆ. ಉತ್ತರಾಖಂಡದಲ್ಲಿ ಮಳೆಯಿಂದ 35 ಜನರು ಸಾವನ್ನಪ್ಪಿದ್ದು, ಕೇರಳದಲ್ಲೂ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಉತ್ತರಾಖಂಡದಲ್ಲಿ ಭೂಕುಸಿತ ಮುಂದುವರೆದಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ, ಮಿಜೋರಾಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಪಶ್ಚಿಮ ಬಂಗಾಳ, ಜಾರ್ಖಂಡ್ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಇಂದು ಕೂಡ ವಿಪರೀತ ಮಳೆಯಾಗಲಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಿಂದ ಕೇರಳದ 11 ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಲಕ್ಕಾಡ್, ಮಣಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅ. 21ರಂದು ಕಾಸರಗೋರು ಮತ್ತು ಕಣ್ಣೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

- Advertisement -

Related news

error: Content is protected !!