Wednesday, May 15, 2024
spot_imgspot_img
spot_imgspot_img

ಕರ್ನಾಟಕದ ನೂತನ ಲೋಕಾಯುಕ್ತರಾಗಿ ಬಿ ಎಸ್ ಪಾಟೀಲ್ ನೇಮಕ

- Advertisement -G L Acharya panikkar
- Advertisement -

ಕರ್ನಾಟಕ ಲೋಕಾಯುಕ್ತರಾಗಿ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೇಮಿಸಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ. ಇವರು ಕರ್ನಾಟಕ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾಯುಕ್ತ ಸ್ಥಾನಕ್ಕೆ ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಹೆಸರನ್ನು ಶಿಫಾರಸು ಮಾಡಿದ್ದರು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಸ್ಪೀಕರ್, ವಿಧಾನಪರಿಷತ್ ಸಭಾಪತಿ ಹಾಗೂ ಉಭಯ ಸದನಗಳ ಪ್ರತಿಪಕ್ಷ ನಾಯಕರುಗಳ ಜೊತೆ ಸಮಾಲೋಚಿಸಿ ನಿರ್ಧಾರ ಕೈಗೊಂಡಿದ್ದರು.

ಹಾಲಿ ಉಪಲೋಕಾಯುಕ್ತರಾಗಿರುವ ಬಿಎಸ್ ಪಾಟೀಲ್ ಜೂ.15ರಂದು ಬೆಳಗ್ಗೆ 9.45ಕ್ಕೆ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಉಪಲೋಕಾಯುಕ್ತರಾಗಿರುವ ಬಿಸ್ ಪಾಟೀಲ್ ಇದೀಗ ಮಹತ್ತರ ಜವಾಬ್ದಾರಿ ನಿರ್ವಹಿಸಲಿದ್ದಾರೆ.

1956ರ ಜೂನ್ 1 ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಪದೆಕಣ್ಣೂರು ಗ್ರಾಮದಲ್ಲಿ ಜನಿಸಿದ್ದ ಪಾಟೀಲ, ಕಾನೂನು ಪದವಿ ಪೂರ್ಣಗೊಳಿಸಿದ ಬಳಿಕ 1980ರಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. 2004ರ ಅಕ್ಟೋಬರ್ 21 ರಂದು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2018ರ ಮೇ 31 ರಂದು ನಿವೃತ್ತಿಯಾಗುವ ವೇಳೆ 13 ವರ್ಷ 7 ತಿಂಗಳ ಕಾಲ ಸೇವೆ ಸಲ್ಲಿಸಿದ್ದರು.

- Advertisement -

Related news

error: Content is protected !!