Tuesday, September 1, 2026
spot_imgspot_img
spot_imgspot_img

ಜಯಕರ್ನಾಟಕ ಜನಪರ ವೇದಿಕೆಯ ಕೇಂದ್ರ ಕಚೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ

- Advertisement -
- Advertisement -

ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಜಯಕರ್ನಾಟಕ ಜನಪರ ವೇದಿಕೆಯ ಕೇಂದ್ರ ಕಚೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿದರು.

ಮೂಲತಃ ಪುತ್ತೂರಿನ ಬೆಳ್ಳಿಪ್ಪಾಡಿ ಮನೆತನದ ಗುಣರಂಜನ್ ಶೆಟ್ಟಿಯವರ ನೇತೃತ್ವದ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯವೈಖರಿಗೆ ಪುತ್ತೂರಿನ ನೆಚ್ಚಿನ ಶಾಸಕರಾದ ಸಂಜೀವ ಮಠಂದೂರು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೆಲವೇ ದಿನಗಳಲ್ಲಿ ಪುತ್ತೂರಿನಲ್ಲಿ ಯೂ ಕೆಲವು ಜನಪರ ಕಾರ್ಯಗಳಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಮೂಲಕ ಚಾಲನೆ ನೀಡಲಾಗುವುದು ಎಂದು ಗುಣರಂಜನ್ ಶೆಟ್ಟಿ ಶಾಸಕರಿಗೆ ಭರವಸೆ ನೀಡಿದರು.

ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಕಾಸ್ಲೆ, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅಕ್ಷಯ್ ರೈ ದಂಬೆ ಕಾನ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Related news

error: Content is protected !!