Monday, April 29, 2024
spot_imgspot_img
spot_imgspot_img

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

- Advertisement -G L Acharya panikkar
- Advertisement -

ಇಂದು 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯವನ್ನು ಕೋರಿದರು.

ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ಮಾಡಿದರು. ನಂತರ ಮಾತನಾಡಿ, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ, ಕನ್ನಡ ನಮ್ಮ ದೇವರು. ಕನ್ನಡವೆಂಬ ತಾಯಿ ದೇವರನ್ನು ಸಂರಕ್ಷಿಸಬೇಕು ಎಂದು ಹೇಳಿದರು.

ಕನ್ನಡ ರಾಜ್ಯೋತ್ಸವ ಎಂದರೆ ಇಡೀ ವಿಶ್ವದಲ್ಲಿರುವ ಎಲ್ಲ ಕನ್ನಡಿಗರಿಗೂ ಒಂದು ರೀತಿ ಸಂಭ್ರಮ ಮತ್ತು ಹೆಮ್ಮೆ. ಕರ್ನಾಟಕ ರಾಜ್ಯ ಉದಯಿಸಿ ಇಂದಿಗೆ 66 ವರ್ಷ. ಈ ಸಂಭ್ರಮಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಕನ್ನಡ ರಾಜ್ಯೋತ್ಸವಕ್ಕೆ ಮೋದಿ ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವಿಶೇಷ ಛಾಪು ಮೂಡಿಸಿದೆ. ಕರ್ನಾಟಕ ರಾಜ್ಯ ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ರಾಜ್ಯ ಯಶಸ್ಸಿನ ಮುಂಚೂಣಿಯಲ್ಲಿರಲಿ ಅಂತ ಕನ್ನಡದಲ್ಲಿ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

- Advertisement -

Related news

error: Content is protected !!