Wednesday, May 15, 2024
spot_imgspot_img
spot_imgspot_img

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ; 67 ಸಾಧಕರ ಆಯ್ಕೆ

- Advertisement -G L Acharya panikkar
- Advertisement -

ಬೆಂಗಳೂರು: 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 67 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸ್ವಾತಂತ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ ಸಂಸ್ಥೆಗಳನ್ನೂ ರಾಜ್ಯೋತ್ಸವ ಪ್ರಶಸ್ತಿಗೆ ಸರ್ಕಾರ ಗುರುತಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಪ್ರಶಸ್ತಿ ಪಟ್ಟಿಯನ್ನು ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್, ಹಿರಿಯ ಸಾಹಿತಿಗಳಾದ ಅ.ರಾ.ಮಿತ್ರ, ಪ್ರೊ.ಕೃಷ್ಣಗೌಡ, ಇಂಗ್ಲಿಷ್ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ಸೋಲಿಗ ಸಮುದಾಯದಲ್ಲಿ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ಹಿರಿಯ ಚಲನಚಿತ್ರ ನಟರಾದ ದತ್ತಣ್ಣ, ಅವಿನಾಶ್, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲದ ಸೂಲಗಿ,ತ್ತಿ ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್‌.ಆರ್, ಶ್ರೀಶ, ಜಿ.ಎಂ ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್, ವೈದ್ಯಕೀಯದಲ್ಲಿ ಡಾ.ಎಚ್.ಎಸ್ ಮೋಹನದಾಸ್‌, ಸಮಾಜ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಸೇರಿ 67 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

- Advertisement -

Related news

error: Content is protected !!