Sunday, September 20, 2026
spot_imgspot_img
spot_imgspot_img

ಕಲ್ಲಡ್ಕ: ಆಟವಾಡುತ್ತಿದ್ದ ವೇಳೆ ಭೀಕರ ದುರಂತ; ಮೂರನೇ ಮಹಡಿ ಮೇಲಿಂದ ಬಿದ್ದು ಬಾಲಕ ಸಾವು

- Advertisement -
- Advertisement -

ಕಲ್ಲಡ್ಕ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯ ತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಪಾಜಾ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್ ಹೌಸ್ ನಲ್ಲಿ ಸಾಹಿಲ್ ಗೆಳೆಯರ ಜೊತೆ ಆಟ ಆಡುತ್ತಿದ್ದ.

ಆ ವೇಳೆ ಆಯ ತಪ್ಪಿ ಮೂರನೇ ಮಹಡಿಯ ಮೇಲಿನಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!