Friday, April 19, 2024
spot_imgspot_img
spot_imgspot_img

ಕಲ್ಲಡ್ಕ: ಶ್ರೀರಾಮ ವಿದ್ಯಾಕೇಂದ್ರದಲ್ಲಿ “ಅಮೃತ ಶೋಭಾಯಾತ್ರೆ”

- Advertisement -G L Acharya panikkar
- Advertisement -

ಕಲ್ಲಡ್ಕ: ಭಾರತದೇಶಕ್ಕೆ ಸ್ವಾತಂತ್ರ್ಯವನ್ನು ಪಡೆದುಕೊಂಡು 75ನೇ ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಈ ಅಮೃತ ಮಹೋತ್ಸವದ ಆಚರಣೆಯನ್ನು ಶ್ರೀರಾಮ ವಿದ್ಯಾಕೇಂದ್ರ 3500ಕ್ಕೂ ಅಧಿಕ ವಿದ್ಯಾರ್ಥಿಗಳನ್ನೊಳಗೊಂಡು ಅಮೃತ ಶೋಭಾಯಾತ್ರೆ ಎಂಬ ಹೆಸರಿನಲ್ಲಿ ಆಚರಿಸಿದರು. ಕಲ್ಲಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿದ ಈ ಮೆರವಣಿಗೆ ೩೫೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು ಘೋಷಣೆ ಕೂಗುತ್ತಾ, ಮೆರವಣಿಗೆಯಲ್ಲಿ ಪಾಲ್ಗೊಂಡರು. ಈ ಭವ್ಯ ಶೋಭಾಯಾತ್ರೆ ಕಲ್ಲಡ್ಕ ಪರಿಸರದಲ್ಲಿ ವಿಶೇಷ ಮೆರುಗುತಂದಿದೆ.

ಈ ವಿಶೇಷ ಕಾರ್ಯಕ್ರಮಕ್ಕೆ ಬಂಟ್ವಾಳ ವಿಧಾನಸಭಾ ಶಾಸಕ ರಾಜೇಶ್ ನಾಯ್ಕ್ ಉಳ್ಳಿಪಾಡಿ ಗುತ್ತು ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಹಾಗೂ ವಿದ್ಯಾಸಂಸ್ಥೆಯ ಸಂಸ್ಥಾಪಕರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧ್ಯಕ್ಷ ಡಾ|| ಪ್ರಭಾಕರ ಭಟ್‌ಕಲ್ಲಡ್ಕ ಇವರು ಈ ಭವ್ಯ ಶೋಭಾಯಾತ್ರೆಗೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್, ಎಲ್ಲಾ ವಿಭಾಗದ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಹಾಗೂ ೩೫೦೦ಕ್ಕೂ ಹೆಚ್ಚು ವಿದ್ಯಾರ್ಥಿ ವಿರ್ದ್ಯಾರ್ಥಿನಿಯರು ಮತ್ತು ಶಿಕ್ಷಕ ಶಿಕ್ಷಕೇತರ ಬಂಧುಗಳು ಈ ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು.

- Advertisement -

Related news

error: Content is protected !!