Thursday, June 4, 2026
spot_imgspot_img
spot_imgspot_img

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನಾ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಜನಜಾಗೃತಿ ಸಮಿತಿಯ ಕೆಲಸಗಳು ಗ್ರಾಮ ಮಟ್ಟದಲ್ಲಿ ಯಶಸ್ವಿಯಾಗಿ ನಡೆದಾಗ ಆರೋಗ್ಯ ಪೂರ್ಣವಾದ ಪರಿವರ್ತನೆ ಸಮಾಜದಲ್ಲಿ ಆಗಲು ಸಾಧ್ಯ ಎಂದು ಮಾಜಿ ಶಾಸಕ, ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರುಕ್ಮಯ ಪೂಜಾರಿ ಹೇಳಿದರು.

ಅವರು ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಜನಜಾಗೃತಿ ವೇದಿಕೆ ನೂತನ ಸಮಿತಿ ರಚನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಚನ್ನಪ್ಪಗೌಡ ಜನಜಾಗೃತಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತ ಸಮಾಜದಲ್ಲಿ ಉತ್ತಮ ಬೆಳವಣಿಗೆಯನ್ನು ತರುತ್ತಿದೆ ಎಂದರು. ಯೋಜನೆಯ ಶಿಬಿರಾಧಿಕಾರಿ ದಿವಾಕರ ಪೂಜಾರಿಯವರು ಕಾಲ ಬದಲಾದಂತೆ ವ್ಯವಸ್ಥೆಯ ಒಳಗೆ ಸದಾ ಚಲನಶೀಲತೆ ಇರಬೇಕು ಎಂದರು.

ಜನಜಾಗೃತಿ ವೇದಿಕೆಯ ಕಲ್ಲಡ್ಕ ವಲಯದ ಅಧ್ಯಕ್ಷೆ ಶ್ರೀಮತಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು .

ವೇದಿಕೆಯಲ್ಲಿ ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಅಭಿಲಾಶ್ ಶೆಟ್ಟಿ, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ , ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹಿರಣ್ಮಯಿ, ಜನಜಾಗೃತಿ ವೇದಿಕೆಯ ಸದಸ್ಯರಾದ ಇದಿನಬ್ಬ ಮೊದಲಾದವರು ಉಪಸ್ಥಿತರಿದ್ದರು.

ಕಲ್ಲಡ್ಕ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಕಲ್ಲಡ್ಕ ವಲಯದ ಗಣ್ಯರು ಹಾಗೂ ನವಜೀವನ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸೇವಾ ಪ್ರತಿನಿಧಿಗಳಾದ ಕೌಶಿತ ಸ್ವಾಗತಿಸಿ, ಯಶೋದ ವಂದಿಸಿದರು. ಕಲ್ಲಡ್ಕ ವಲಯ ಮೇಲ್ವಿಚಾರಕಿ ಶ್ರೀಮತಿ ಸುಗುಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

- Advertisement -

Related news

error: Content is protected !!