Monday, April 29, 2024
spot_imgspot_img
spot_imgspot_img

ಕಳೆದ 24 ಗಂಟೆಗಳಲ್ಲಿ 32,937 ಕೊರೋನಾ ಸೋಂಕಿತರು ಪತ್ತೆ!

- Advertisement -G L Acharya panikkar
- Advertisement -

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 32,937 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 417 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 431642 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 381947 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35909 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31411924 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 11,81,212 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 17,43,114 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 54,58,57,108 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

- Advertisement -

Related news

error: Content is protected !!