Tuesday, June 23, 2026
spot_imgspot_img
spot_imgspot_img

ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರಿದ ಹಿಮಾನ್ಶು ವ್ಯಾಸ್

- Advertisement -
- Advertisement -

ಗುಜರಾತ್: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಕೆಲವೇ ಗಂಟೆಗಳಲ್ಲಿ ಹಿಮಾನ್ಶು ವ್ಯಾಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ವಿವಿಧ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿಯಾಗಿದ್ದ ಹಿಮಾನ್ಶು ವ್ಯಾಸ್ ಅವರು ಶನಿವಾರ ಬೆಳಗ್ಗೆಯಷ್ಟೇ ತನ್ನ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿ, ಪಕ್ಷದಲ್ಲಿ ಅವಗಣನೆ ಮಾಡುತ್ತಿರುವ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇದೀಗ ಸಂಜೆ ವೇಳೆಗೆ ಅವರು ಬಿಜೆಪಿಗೆ ಸೇರಿದ್ದಾರೆ.

ಇನ್ನು ಬಿಜೆಪಿಗೆ ಮಾಜಿ ಸಚಿವ ಜೈ ನಾರಾಯಣ್ ವ್ಯಾಸ್ ಅವರು ಶನಿವಾರ ರಾಜೀನಾಮೆ ಸಲ್ಲಿಸಿದ್ದು, ಅವರು ಕಾಂಗ್ರೆಸ್ ಅಥವಾ ಆಮ್ ಆದ್ಮಿ ಪಕ್ಷ ಸೇರುವ ವ ಸಾಧ್ಯತೆಗಳಿವೆ ಎನ್ನಲಾಗಿದೆ.

- Advertisement -

Related news

error: Content is protected !!