Thursday, April 25, 2024
spot_imgspot_img
spot_imgspot_img

ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಪ್ರಮಾಣ ವಚನ ಸ್ವೀಕಾರ

- Advertisement -G L Acharya panikkar
- Advertisement -

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಹೊಸದಾಗಿ ಚುನಾಯಿತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ಮುಖ್ಯಸ್ಥರಾಗಿ ಹುದ್ದೆಯನ್ನು ಸ್ವೀಕರಿಸಲಿದ್ದಾರೆ. ಇದೇ ಸಮಾರಂಭದಲ್ಲಿ ಅವರು ಹುದ್ದೆಗೆ ಆಯ್ಕೆಯಾದ ಪ್ರಮಾಣಪತ್ರವನ್ನು ಸಹ ಅವರಿಗೆ ನೀಡಲಾಗುವುದು

ಮಲ್ಲಿಕಾರ್ಜುನ ಖರ್ಗೆ 7987 ಮತಗಳನ್ನು ಪಡೆದು ಸ್ಪಷ್ಟ ಗೆಲುವು ಸಾಧಿಸಿದರೆ, ಪ್ರತಿ ಸ್ಪರ್ಧಿ ಶಶಿ ತರೂರ್ 1072 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಅಕ್ಟೋಬರ್ 17 ರಂದು ಭಾರತದಾದ್ಯಂತ 9,000 ಕ್ಕೂ ಹೆಚ್ಚು ಕಾಂಗ್ರೆಸ್ ಪ್ರತಿನಿಧಿಗಳು ತಮ್ಮ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಮತ ಚಲಾಯಿಸಿದ್ದರು.

137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷದ ಸಂಕ್ರಮಣ ಕಾಲದಲ್ಲಿ ಹಾಗೂ 24 ವರ್ಷಗಳ ಬಳಿಕ ಕಾಂಗ್ರೆಸ್‌ ಅಧ್ಯಕ್ಷ ಗಾದಿ ಮೇಲೆ ಗಾಂಧಿಯೇತರ ವ್ಯಕ್ತಿ ಖರ್ಗೆ ಆಸೀನರಾಗಿದ್ದು, 2024ರ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆ ಅವರ ಹೆಗಲ ಮೇಲಿದೆ.

- Advertisement -

Related news

error: Content is protected !!