Thursday, May 16, 2024
spot_imgspot_img
spot_imgspot_img

‘ಕಾಂಗ್ರೆಸ್​ ಸೇರಿದ ತಂಗಿ ಪರ ಪ್ರಚಾರ ಮಾಡಲ್ಲ’ ನಟ ಸೋನು ಸೂದ್​

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಬಹುಭಾಷಾ ನಟ ಸೋನು ಸೂದ್​ ಅವರು ಸಿನಿಮಾಗಳಿಗಿಂತಲೂ ಹೆಚ್ಚಾಗಿ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಮೊದಲ ಲಾಕ್​ಡೌನ್​ ಆರಂಭ ಆದಾಗಿನಿಂದಲೂ ಅವರು ಜನಪರ ಕಾರ್ಯ ಮಾಡುತ್ತಿದ್ದಾರೆ. ಅನೇಕ ಬಡವರಿಗೆ ಸಹಾಯ ಮಾಡುವ ಮೂಲಕ ಅವರು ರಿಯಲ್​ ಹೀರೋ ಎನಿಸಿಕೊಂಡಿದ್ದಾರೆ.

ಸೋನು ಸೂದ್​ ಇಷ್ಟೆಲ್ಲ ಮಾಡುತ್ತಿರುವುದು ರಾಜಕೀಯ ಸೇರುವ ಉದ್ದೇಶದಿಂದ ಎಂದು ಈ ಹಿಂದೆ ಕೆಲವರು ಟೀಕಿಸಿದ್ದುಂಟು. ಆದರೆ ತಮಗೆ ರಾಜಕೀಯದ ಉದ್ದೇಶ ಇಲ್ಲ ಎಂದು ಸೋನು ಸೂದ್​ ಪದೇಪದೇ ಹೇಳುತ್ತಲೇ ಇದ್ದಾರೆ. ಅವರ ಸಹೋದರಿ ಮಾಳವಿಕಾ ಸೂದ್​ ಕಾಂಗ್ರೆಸ್​ ಪಕ್ಷ ಸೇರಿರುವುದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಈ ಕುರಿತು ಸೋನು ಸೂದ್​ ಪ್ರತಿಕ್ರಿಯೆ ನೀಡಿದ್ದಾರೆ. ತಂಗಿಯ ಪರವಾಗಿ ಪ್ರಚಾರ ಮಾಡುವುದಿಲ್ಲ ಎಂದು ಅವರು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

vtv vitla

ಪಂಜಾಬ್​ನ ಕಾಂಗ್ರೆಸ್​ ಪಕ್ಷದ ಜೊತೆಗೆ ಮಾಳವಿಕಾ ಸೂದ್​ ಕೈ ಜೋಡಿಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ. ‘ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟ ನನ್ನ ತಂಗಿ ಬಗ್ಗೆ ನನಗೆ ಹೆಮ್ಮೆ ಇದೆ. ಕಳೆದ ಕೆಲವು ವರ್ಷಗಳಿಂದ ಆಕೆ ಪಂಜಾಬ್​​ನಲ್ಲಿ ವಾಸಿಸುತ್ತಿದ್ದಾಳೆ. ಜನರ ಸಮಸ್ಯೆಗಳೇನು ಎಂಬುದನ್ನು ತಿಳಿದಿದ್ದಾಳೆ. ಜನರ ಜೊತೆ ಸಂಪರ್ಕದಲ್ಲಿ ಇದ್ದುಕೊಂಡು ನೇರವಾಗಿ ಆಕೆ ಸಹಾಯ ಮಾಡುತ್ತಾಳೆ ಎಂದರೆ ಅದು ಖುಷಿಯ ವಿಚಾರ’ ಎಂದು ಸೋನು ಸೂದ್​ ಹೇಳಿದ್ದಾರೆ.

‘ರಾಜಕೀಯದಲ್ಲಿ ಮುಂದುವರಿಯಬೇಕು ಎಂಬುದು ಆಕೆಯ ನಿರ್ಧಾರ. ನನಗೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ. ನಾನು ಮಾಡುತ್ತಿರುವ ಕೆಲಸವನ್ನು ಮುಂದುವರಿಸುತ್ತೇನೆ. ಚುನಾವಣೆಯಲ್ಲಿ ತಂಗಿಯ ಪರವಾಗಿ ನಾನು ಪ್ರಚಾರ ಮಾಡುವುದಿಲ್ಲ. ಯಾಕೆಂದರೆ, ಆಕೆಯೇ ಪರಿಶ್ರಮಪಡಬೇಕು. ನಾನು ಮಾತ್ರ ಎಲ್ಲ ರಾಜಕೀಯ ಪಕ್ಷಗಳಿಂದ ದೂರ ಉಳಿದುಕೊಳ್ಳುತ್ತೇನೆ’ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೋನು ಸೂದ್​ ಹೇಳಿದ್ದಾರೆ.

vtv vitla
vtv vitla
- Advertisement -

Related news

error: Content is protected !!