Monday, June 22, 2026
spot_imgspot_img
spot_imgspot_img

ಕಾಂಗ್ರೆಸ್ ಮುಖಂಡನ ಮೇಲೆ ಚಾಕು ಇರಿತ

- Advertisement -
- Advertisement -

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ಅನಂದರೆಡ್ಡಿ (50) ಮೇಲೆ, ಅದೇ ಗ್ರಾಮದ ವಿಷ್ಣವರ್ಧನ್ ರೆಡ್ಡಿ (38) ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ.

ಬೆಳ್ಳಂಬೆಳಗ್ಗೆ ಕುಡಿದು ಸಿಗರೇಟ್ ಕೇಳುತ್ತೀಯಾ ಹೋಗು ಎಂದು ಬುದ್ಧಿವಾದ ಹೇಳಿದ್ದಕ್ಕೆ, ವಿಷ್ಣವರ್ಧನ್ ಕೆರಳಿ ತನ್ನ ಬಳಿ ಇದ್ದ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಆನಂದರೆಡ್ಡಿಯನ್ನು ಕೂಡಲೇ ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Related news

error: Content is protected !!