Wednesday, May 15, 2024
spot_imgspot_img
spot_imgspot_img

ಕಾಂತಾರಕ್ಕೆ ಶಾಕ್ ಕೊಟ್ಟ ಕೇರಳ ಕೋರ್ಟ್, “ವರಾಹ ರೂಪಂ” ಹಾಡು ಬಳಸದಂತೆ ಸೂಚನೆ

- Advertisement -G L Acharya panikkar
- Advertisement -

ಎಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿಗೆ ವಿವಾದ ಸುತ್ತಿಕೊಂಡಿತ್ತು.
ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿತ್ತು. ಈ ಸಂಬಂಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡ ಕೋರ್ಟ್ ಮೆಟ್ಟಿಲೇರಿತ್ತು. ಈ ಕೇಸ್ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ , ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದೆ.

ಮಲಯಾಳಂ ಸಿನಿಮಾದಿಂದ ಕಾಪಿ ಮಾಡಿದ್ದ ಆರೋಪ
ಕಾಂತಾರಾ ಸಿನಿಮಾದ ವರಾಹ ರೂಪಂ ಎನ್ನುವ ಫೇಮಸ್​ ಟ್ಯೂನ್​ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಅಂತ ಚರ್ಚೆ ಶುರುವಾಗಿತ್ತು. ಈ ಹಾಡಿನ ಮೇಲೆ ಕೃತಿಚೌರ್ಯದ ಆರೋಪ ಕೇಳಿಬಂದಿತ್ತು . ಸಂಗೀತ ನಿರ್ದೇಶಕ ಅಜನೀಶ್​ ಬಿ. ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪ ಎದುರಾಗಿದೆ. ಹಾಗಾಗಿ ಈ ಹಾಡನ್ನು ಒಳಗೊಂಡಿದ್ದ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಕೇಸ್​ ಹಾಕಲು ನಿರ್ಧರಿಸಿದ್ದರು.

ಇದು ಕಾಪಿ ಅಲ್ಲ, ಸ್ಫೂರ್ತಿ ಎಂದಿದ್ದ ಕಾಂತಾರ ತಂಡ
‘ಕಾಂತಾರ’ ಚಿತ್ರ ಬಿಡುಗಡೆ ಆದಾಗಲೇ ‘ವರಾಹ ರೂಪಂ..’ ಮತ್ತು ‘ನವರಸಂ..’ ಹಾಡಿನ ನಡುವೆ ಇರುವ ಸಾಮ್ಯತೆ ಬಗ್ಗೆ ಸಾಕಷ್ಟು ಚರ್ಚೆ ಆಗಿತ್ತು. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ಈ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ಆದರೆ ‘ಇದು ಕಾಪಿ ಅಲ್ಲ, ಕೇವಲ ಸ್ಫೂರ್ತಿ ಪಡೆದು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ’ ಎಂದು ಅಜನೀಶ್​ ಬಿ. ಲೋಕನಾಥ್ ಅವರು ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ ‘ತೈಕ್ಕುಡಂ ಬ್ರಿಡ್ಜ್​’ ತಂಡದವರು ಈಗ ಕೇಸ್​ ಹಾಕಲು ನಿರ್ಧರಿಸಿದ್ದರು.

ಕಾಂತಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ತೈಕ್ಕುಡಂ ಬ್ರಿಡ್ಜ್ ತಂಡ
ಇನ್ನು ಕಾಂತಾರ ತಂಡದ ವಿರುದ್ಧ ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್​’ ತಂಡ ಬೇಸರ ವ್ಯಕ್ತಪಡಿಸಿತ್ತು. ‘ನಾವು ನಮ್ಮ ಕೇಳುಗರಿಗೆ ತಿಳಿಸುವುದೇನೆಂದರೆ, ಯಾವುದೇ ರೀತಿಯಲ್ಲೂ ‘ತೈಕ್ಕುಡಂ ಬ್ರಿಡ್ಜ್​’ ತಂಡವು ‘ಕಾಂತಾರ’ ಸಿನಿಮಾ ಜೊತೆ ಸಹಯೋಗ ಹೊಂದಿಲ್ಲ. ವರಾಹ ರೂಪಂ ಮತ್ತು ನವರಸಂ ಹಾಡುಗಳ ನಡುವೆ ಇರುವ ಸಾಮ್ಯತೆಯು ಕಾಪಿರೈಟ್​ ಕಾನೂನಿನ ಸ್ಪಷ್ಟ ಉಲ್ಲಂಘನೆ ಆಗಿದೆ. ಇದಕ್ಕೆ ಕಾರಣವಾದವರ ವಿರುದ್ಧ ನಾವು ಕಾನೂನಿನ ಕ್ರಮಕ್ಕೆ ಒತ್ತಾಯಿಸುತ್ತೇವೆ’ ಎಂದು ‘ತೈಕ್ಕುಡಂ ಬ್ರಿಡ್ಜ್​’ ತಂಡ ಸೋಶಿಯಲ್​ ಮೀಡಿಯಾದಲ್ಲಿ ತಿಳಿಸಿತ್ತು.

ಕೋಝಿಕೋಡ್ ಕೋರ್ಟ್ ಮೆಟ್ಟೇಲಿರಿದ ತಂಡ.! ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡ ಹೇಳುತ್ತಿರುವುದೇನು?
ಇನ್ನು ಹಾಡಿನ ವಿವಾದದ ಕುರಿತಂತೆ ತೈಕ್ಕುಡಂ ಬ್ರಿಡ್ಜ್​’ ತಂಡ ಕೇರಳದ ಕೋಝಿಕೋಡ್‌ ಕೋರ್ಟ್ ಮೆಟ್ಟಿಲೇರಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್, ವರಾಹ ರೂಪಂ ಹಾಡಿಗೆ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು ‘ತೈಕ್ಕುಡಂ ಬ್ರಿಡ್ಜ್​’ ಚಿತ್ರತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದೆ.

ಪ್ರಧಾನ ಜಿಲ್ಲೆ ಮತ್ತು ಕೋಝಿಕ್ಕೋಡ್ ನ್ಯಾಯಾಧೀಶರು ಹಾಡಿಗೆ ತಡೆಯಾಜ್ಞೆ ನೀಡಿದ್ದಾರೆ. ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ ಜೊತೆಗೆ Amazon, YouTube, Spotify, Wynk, ಸಂಗೀತ, ಜಿಯೋ ಸವನ್ ಮತ್ತು ಇತರರು ತೈಕ್ಕುಡಂ ಬ್ರಿಡ್ಜ್ ಅನುಮತಿ ಪಡೆಯದೇ ಬಳಸುವಂತಿಲ್ಲ. ಕಾಂತಾರ ತಂಡದ ಮೇಲೆ ತಡೆಯಾಜ್ಞೆ ದಾವೆ ಹೂಡಲಾಗಿದೆ ಅಂತ ತಿಳಿಸಿದೆ.

- Advertisement -

Related news

error: Content is protected !!