Saturday, April 20, 2024
spot_imgspot_img
spot_imgspot_img

ಕಾಪು: ಟಿಪ್ಪರ್ ಮತ್ತು ಬೈಕ್ ನಡುವೆಅಪಘಾತ – ಸವಾರ ಮೃತ್ಯು

- Advertisement -G L Acharya panikkar
- Advertisement -

ಕಾಪು: ಇನ್ನಂಜೆ‌-ಕಲ್ಲುಗುಡ್ಡೆ ರಸ್ತೆಯಲ್ಲಿ ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಇನ್ನಂಜೆ‌ – ಕಲ್ಲುಗುಡ್ಡೆ – ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿ ಚಕ್ರದಡಿ ಸಿಲುಕಿದ ಬೈಕ್ ಸಂಪೂರ್ಣ ನಜ್ಹುಗುಜ್ಜಾಗಿದ್ದು ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಾಪು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಅಪಘಾತಕ್ಕೊಳಗಾದ ಬೈಕ್ ಮತ್ತು ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -

Related news

error: Content is protected !!