Saturday, June 28, 2025
spot_imgspot_img
spot_imgspot_img

ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ; ವಿಶ್ರಾಂತಿ ಪಡೆಯುತ್ತಿದ್ದ ದಂಪತಿ ಮೇಲೆ ದಾಳಿ

- Advertisement -
- Advertisement -

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಬಣಕಲ್‌ ಪಶು ಆಸ್ಪತ್ರೆ ಬಳಿ ಟೆಂಟ್ ಹಾಕಿಕೊಂಡು ಮಲಗಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಂಭವಿಸಿದೆ.

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು 2 ದಿನಗಳ ಹಿಂದೆ ರೈತನೋರ್ವ ಬಲಿಯಾಗಿದ್ದರೆ ಇದೀಗ ರಸ್ತೆ ಬದಿ ಆಶ್ರಯ ಪಡೆದಿದ್ದವರ ಮೇಲೆ ಕಾಡಾನೆ ದಾಳಿ ನಡೆಸಿದೆ.

ದಾಳಿಯಿಂದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾಸನ ಜಿಲ್ಲೆಯ ಹಗರೇ ಮೂಲದ ನಾಗವಲ್ಲಿ ಮತ್ತು ಗಂಡುಗುಸೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನ ಮೂಡಿಗೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!