
ಬಂಟ್ವಾಳ: ಕಾರಿಂಜ ಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತೆ ಗಣಿಗಾರಿಕೆಯನ್ನು ಪ್ರಾರಂಭಿಸಿದ ಹಿನ್ನೆಲೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ರವರು ಗಣಿಗಾರಿಕಾ ಪ್ರದೇಶಕ್ಕೆ ದಾಳಿ ನಡೆಸಿ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿಂಜ ಕ್ಷೇತ್ರದ ಸುತ್ತಮುತ್ತಲಿನಲ್ಲಿ ಬೃಹತ್ ಸ್ಪೋಟಕಗಳ ಮೂಲಕ ಮತ್ತೆ ಪ್ರಾರಂಭವಾದ ಗಣಿಗಾರಿಕೆ ಸುದ್ದಿ ಗೊತ್ತಾಗುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸಿದ್ದು, ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮತ್ತೆ ಗಣಿಗಾರಿಕೆ ಪ್ರಾರಂಭವಾದ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆ ಸ್ಫೋಟ ನಡೆದ ಗಣಿಗಾರಿಕಾ ಪ್ರದೇಶಕ್ಕೆ ದಾಳಿ ನಡೆಸಿದ ತಹಶೀಲ್ದಾರ್ ರವರು ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದೆ.


ಕಾರಿಂಜ ಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳನ್ನು ನಿಲ್ಲಿಸಬೇಕು ಎಂದು ಈಗಾಗಲೇ ಹಿಂದೂ ಜಾಗರಣ ವೇದಿಕೆ ಹಲವಾರು ಹೋರಾಟಗಳನ್ನು ನಡೆಸಿದ್ದು,ಇನ್ನೂ ಮುಂದಿನ ದಿನಗಳಲ್ಲಿಯೂ ಗಣಿಗಾರಿಕೆ ವಿರುದ್ಧವಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದೆ.

