Friday, April 19, 2024
spot_imgspot_img
spot_imgspot_img

ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಸರಕಾರ ‌ಆದೇಶ; ಹಿಂಜಾವೇ ಹೋರಾಟಕ್ಕೆ ಸಂದ ಜಯ

- Advertisement -G L Acharya panikkar
- Advertisement -
vtv vitla

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾರಿಂಜೇಶ್ವರ ಸನ್ನಿಧಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ನಿಷೇಧ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ಮೂಲಕ ಹಿಂದೂ ಜಾಗರಣಾ ವೇದಿಕೆಯ ಹೋರಾಟಕ್ಕೆ ಜಯ ಸಿಕ್ಕಿದೆ. ಕಾರಿಂಜ ದೇವಾಲಯದ ಸುತ್ತಮುತ್ತ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂಬುದು ಅರೋಪವಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಆದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ.

ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು, 1994ರ ನಿಯಮ 8(3) ರಲ್ಲಿ ಪ್ರದವಾಗಿರುವ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು, ಕಾವಳಮುರು ಗ್ರಾಮದ ವ್ಯಾಪ್ತಿಯ ಶ್ರೀ ಕಾರಿಂಜೇಶ್ವರ ದೇವಸ್ಥಾನದ 02 ಕಿಲೋ ಮೀಟರ್ ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯಿರಿಸಿ, ಸದರಿ ಸ್ಥಳದ 02 ಕಿಲೋ ಮೀಟರ್ ಸುತ್ತಳತೆ ವ್ಯಾಪ್ತಿಯಲ್ಲಿ, ಎಲ್ಲಾ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕುವ) ಚಟುವಟಿಕೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿಷೇಧಿಸಿದೆ ಎಂಬ ಅದೇಶ ಹೊರಡಿಸಿದೆ.

ಅಕ್ರಮ ಗಣಿಗಾರಿಕೆಯ ವಿರುದ್ದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿತ್ತು. ಗಣಿಗಾರಿಕೆಯನ್ನು ನಿಲ್ಲಿಸಲು ಪ್ರತಿಭಟನೆ , ಸಹಿತ ಅನೇಕ ಹೋರಾಟಗಳು ನಡೆದ ಪರಿಣಾಮ ಹಾಗೂ ಇವರ ಹೋರಾಟದ ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ನೀಡಿದ ಬೆಂಬಲದಿಂದ ಗಣಿಗಾರಿಕೆ ಬಂದ್ ಆಗಿದೆ. ಹಿಂದೂ ಜಾಗರಣಾ ವೇದಿಕೆಯವರ ಹೋರಾಟದ ಬಗ್ಗೆ ಶಾಸಕರು ಮುಖ್ಯಮಂತ್ರಿ ಅವರಿಗೆ ಗಣಿಗಾರಿಕೆಯನ್ನು ನಿಲ್ಲಿಸುವ ಅದೇಶ ಮಾಡುವಂತೆ ಮನವಿ ಮಾಡಿದ್ದರು. ಇದೀಗ ಸರಕಾರದ ಅದೇಶ ಹೊರಡಿಸಿದ್ದು, ಭಕ್ತರು ಸಂತಸ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!