Wednesday, June 26, 2024
spot_imgspot_img
spot_imgspot_img

ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಯುವಕರು ಮೃತ್ಯು

- Advertisement -G L Acharya panikkar
- Advertisement -

ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾರು- ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ರುದ್ರೇಶ್‌ ಎಂಬ ಯುವಕನಿಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!