Sunday, June 29, 2025
spot_imgspot_img
spot_imgspot_img

ಕಾರು ಹಾಗೂ ಕಂಟೈನರ್ ನಡುವೆ ಭೀಕರ ಅಪಘಾತ; ಕಾಲೇಜು ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

- Advertisement -
- Advertisement -

ಕಾರೊಂದು ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರುನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ. ಮಂಗಳೂರು ನಿವಾಸಿ ಅನಂತೇಶ ರಾವ್ (40) ಮೃತಪಟ್ಟ ವ್ಯಕ್ತಿ.

ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅನಂತೇಶ ರಾವ್ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್‌ಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದೆ.

- Advertisement -

Related news

error: Content is protected !!