Sunday, June 7, 2026
spot_imgspot_img
spot_imgspot_img

ಕಾರ್ಕಳ : ಆಟದ ಮೈದಾನದಲ್ಲಿ ಕುಸಿದು ಬಿದ್ದು ಯುವಕ ಮೃತ್ಯು

- Advertisement -
- Advertisement -

ಕಾರ್ಕಳ : ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭ ಯುವಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸಂಭವಿಸಿದೆ. ಸಂತೋಷ (34) ಮೃತಪಟ್ಟ ವ್ಯಕ್ತಿ.

ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷ್ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸಂತೋಷ್ ಅವರಿಗೆ ಕಳೆದ 5 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾಗ ಹೃದಯಾಘಾತವಾಗಿದ್ದು ಚಿಕಿತ್ಸೆ ಪಡೆದಿರುತ್ತಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!