Monday, September 14, 2026
spot_imgspot_img
spot_imgspot_img

ಕಾರ್ಕಳ: ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಪ್ರಗತಿಪರ ಕೃಷಿಕ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ: ಪ್ರಗತಿಪರ ಕೃಷಿಕರೋರ್ವರು ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಾರ್ಕಳ ಪ್ರಗತಿಪರ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ) ಅವರು ಆತ್ಮಹತ್ಯೆ ಮಾಡಿಕೊಂಡವರು. ಪತ್ನಿ ಚಹಾ ಮಾಡಲೆಂದು ಅಡುಗೆ ಕೋಣೆಗೆ ಹೋಗಿದ್ದಾಗ ಭಾಸ್ಕರ ಹೆಗ್ಡೆಯವರು ಗುಂಡು ಹೊಡೆದುಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಪತ್ನಿ ಹೊರಗೋಡಿ ಬಂದಾಗ ಕೃತ್ಯ ಎಸಗಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ಸಾಲಬಾಧೆ ಕಾರಣ ಎನ್ನಲಾಗುತ್ತಿದ್ದು, ಖಚಿತ ಮಾಹಿತಿ ತಿಳಿದು ಬಂದಿಲ್ಲ.

ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕರಾಗಿ ಗಮನ ಸೆಳೆದಿದ್ದರು. ತಮ್ಮ ಜಮೀನಿನಲ್ಲಿ ಸಾವಯವ ಕೃಷಿ ಮಾಡಿದ್ದರು.

- Advertisement -

Related news

error: Content is protected !!