Sunday, June 21, 2026
spot_imgspot_img
spot_imgspot_img

ಕಾರ್ಕಳ: ಬಾವಿಗೆ ಹಾರಿ ಸಾವಿಗೆ ಶರಣಾದ ತಾಲೂಕು ಕಚೇರಿಯ ಸಿಬ್ಬಂದಿ

- Advertisement -
- Advertisement -

ಕಾರ್ಕಳ: ತಾಲೂಕು ಕಚೇರಿಯ ಸರ್ಕಾರಿ ಸಿಬ್ಬಂದಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಶ್ಮಿತಾ (24) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಸುಶ್ಮಿತಾ ಹುಡ್ಕೊ ಕಾಲನಿ ನಿವಾಸಿಯಾಗಿದ್ದರು. ನಿನ್ನೆ ಮನೆ ಸಮೀಪದ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ತಮ್ಮ ಪ್ರತಿಭೆಯ ಆಧಾರದಲ್ಲಿ ಸರಕಾರಿ ನೌಕರಿ ಪಡೆದುಕೊಂಡಿದ್ದ ಈಕೆ ಕಚೇರಿಯಲ್ಲಿ ಉತ್ತಮ ಸಿಬ್ಬಂದಿ ಎಂಬ ಹೆಸರು ಸಂಪಾದಿಸಿದ್ದರು. ತಂದೆ, ತಾಯಿ, ಓರ್ವ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ.

vtv vitla
- Advertisement -

Related news

error: Content is protected !!