Sunday, June 7, 2026
spot_imgspot_img
spot_imgspot_img

ಕಾರ್ಕಳ: ಮನೆಯಲ್ಲೇ ಹೆರಿಗೆ ಮಾಡಿಸಿ ಸಮಯ ಪ್ರಜ್ಞೆ ಮೆರೆದ ಆಂಬ್ಯುಲೆನ್ಸ್‌ ಸಿಬ್ಬಂದಿ.!

- Advertisement -
- Advertisement -

vtv vitla

ಕಾರ್ಕಳ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಆಂಬ್ಯುಲೆನ್ಸ್‌ ಸಿಬ್ಬಂದಿ ಮನೆಯಲ್ಲಿಯೇ ಹೆರಿಗೆ ಮಾಡಿಸಿ ಬಳಿಕ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ನಿಟ್ಟೆ ಗ್ರಾಮದ ಗೀತಾ ಎಂಬವರು ಹೆರಿಗೆ ನೋವಿನಿಂದ ನರಳುತಿದ್ದರು. ಈ ಸಂದರ್ಭ ಸ್ಥಳಕ್ಕಾಗಮಿಸಿದ ಆಂಬ್ಯುಲೆನ್ಸ್‌ ಸಿಬ್ಬಂದಿ ರಾಧಾಮಣಿ ಜಿ ಕೆ ಮನೆಯಲ್ಲಿಯೇ ಹೆರಿಗೆ ಮಾಡಿಸಿದ್ದಾರೆ.

ಮನೆಗೂ ಹೆದ್ದಾರಿಗೂ ಸುಮಾರು 1 ಕೀ ಮಿ. ದೂರ ಇದ್ದು, ಆಂಬ್ಯುಲೆನ್ಸ್‌ ಮನೆಯ ಬಳಿ ಹೋಗಲು ಸಾಧ್ಯವಿಲ್ಲದ ಕಾರಣ ಮನೆಯಲ್ಲಿಯೇ ಹೆರಿಗೆ ಮಾಡಿಸಲಾಯಿತು. ಬಳಿಕ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಕಾರ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಗೀತಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

- Advertisement -

Related news

error: Content is protected !!