Sunday, June 7, 2026
spot_imgspot_img
spot_imgspot_img

ಕಾರ್ಕಳ: ಶಾಲಾ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರಿನಲ್ಲಿ ಪಲ್ಟಿ

- Advertisement -
- Advertisement -

ಕಾರ್ಕಳ : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ ಶೈಕ್ಷಣಿಕ ಪ್ರವಾಸದ ಬಸ್ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ಪಲ್ಟಿಯಾಗಿದೆ. ಬಸ್‌ ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದೆ, ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಬಸ್‌ನಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಥಳಿಯರಿಂದ ಮಾಹಿತಿ ತಿಳಿದು ಬಂದಿದೆ. ಹೆಚ್ಚಿನ ವಿವರ ಇನ್ನಷ್ಟು ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!