Sunday, September 13, 2026
spot_imgspot_img
spot_imgspot_img

ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ನಶೆಯಲ್ಲಿ ತೇಲಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ; ಪ್ರಕರಣ ದಾಖಲು

- Advertisement -
- Advertisement -

ಕಾರ್ಕಳ: ನಿಟ್ಟೆ ಗ್ರಾಮದ ನಿಟ್ಟೆ ಗರಡಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ನಶೆಯಲ್ಲಿ ತೇಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ ಅವರು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಾತನನ್ನು ಶಹದತ್ (21) ಎಂದು ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದು ಪರಿಶೀಲನೆ ನಡೆಸಿದಾಗ ಆತನ ಬಾಯಿಯಲ್ಲಿ ಘಾಟು ವಾಸನೆ ಬರುತ್ತಿತ್ತು. ಗಾಂಜಾ ಅಥವಾ ಅಮಲು ಪದಾರ್ಥ ಸೇವನೆ ಮಾಡಿರಬಹುದು ಎಂದು ಸಂಶಯದ ಮೇರೆಗೆ ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ತಿಳಿದು ಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!