Friday, March 29, 2024
spot_imgspot_img
spot_imgspot_img

ಅಂಗನವಾಡಿ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದ ಸರ್ಕಾರ; ಅಂಗನವಾಡಿ ಕೇಂದ್ರಗಳ ಅವಧಿ 3 ಗಂಟೆಗಳ ಕಾಲ ಕಡಿತ

- Advertisement -G L Acharya panikkar
- Advertisement -

ಬೆಂಗಳೂರು : ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು 3 ಗಂಟೆಗಳ ಕಾಲ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ಆದೇಶದ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅಂಗನವಾಡಿಗಳು ಕಾರ್ಯನಿರ್ವಹಿಸಲಿವೆ.

ಈ ಹಿಂದೆ ಬೆಳಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಅಂಗನವಾಡಿಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೀಗ ಹೊಸ ಆದೇಶದ ಪ್ರಕಾರ ಮೂರು ಗಂಟೆ ಕಡಿತಗೊಳ್ಳಲಿದೆ. ಅಂದರೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮಕ್ಕಳಿಗೆ ಅಂಗನವಾಡಿಗಳಲ್ಲಿ ಶಿಕ್ಷಣ ಲಭಿಸಲಿದೆ.

ಪ್ರಧಾನಮಂತ್ರಿ ಮಾತೃ ವಂದನೆ ಯೋಜನೆ ಹಾಗೂ ಭಾಗ್ಯ ಲಕ್ಷ್ಮಿ ಯೋಜನೆಯ ಫಲಾನುಭವಿಗಳು ಯೋಜನೆ ಸಂಬಂಧ ಯಾವುದೇ ಮಾಹಿತಿಗಾಗಿಯೂ ಮಧ್ಯಾಹ್ನ 2 ಗಂಟೆಯ ಬಳಿಕವೇ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ಸೂಚಿಸಲಾಗಿದೆ.

- Advertisement -

Related news

error: Content is protected !!