Thursday, May 2, 2024
spot_imgspot_img
spot_imgspot_img

ಕಾರ್ಯಕ್ರಮದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳು; ಕಾಲೇಜಿನಿಂದ ಅಮಾನತು

- Advertisement -G L Acharya panikkar
- Advertisement -

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಮೂವರು ವಿದ್ಯಾರ್ಥಿಗಳು ಘೋಷಣೆ ಕೂಗಿದ್ದಾರೆ

ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮೂವರನ್ನು ಸಸ್ಪೆಂಡ್ ಮಾಡಿದ್ದ ಕಾಲೇಜು ಆಡಳಿತ ಮಂಡಳಿ, ಬಳಿಕ ಮಾರತ್ತಹಳ್ಳಿ ಠಾಣೆಗೆ ದೂರು ನೀಡಿತ್ತು.

ಕೂಡಲೇ ಮೂವರನ್ನೂ ವಶಕ್ಕೆ ಪಡೆದಿದ್ದ ಮಾರತ್ತಹಳ್ಳಿ ಪೊಲೀಸರು ತಡರಾತ್ರಿಯವರೆಗೂ ವಿಚಾರಣೆ ಕೈಗೊಂಡಿದ್ದಾರೆ. ತನಿಖೆ ವೇಳೆ ಆರೋಪಿಗಳು ಉದ್ದೇಶಪೂರ್ವಕವಾಗಿ ಘೋಷಣೆ ಕೂಗಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಸದ್ಯ ವಿದ್ಯಾರ್ಥಿಗಳ ಮೊಬೈಲ್ ವಶಕ್ಕೆ ಪಡೆದು ಕಳಿಸಿದ್ದ ಮಾರತ್ತಹಳ್ಳಿ ಪೊಲೀಸರು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ವೀಕ್ಷಿಸಲು ನೂರಾರು ವಿದ್ಯಾರ್ಥಿಗಳು ಆಗಮಿಸಿದ್ದರು. ಎಲ್ಲರಂತೆ ಕಾರ್ಯಕ್ರಮ ವೀಕ್ಷಿಸಲೆಂದು ಬಂದಿದ್ದವರಲ್ಲಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಈ ಮೂವರು ವಿದ್ಯಾರ್ಥಿಗಳ ಪೈಕಿ, ವಿದ್ಯಾರ್ಥಿನಿ ಹಾಗೂ ಓರ್ವ ವಿದ್ಯಾರ್ಥಿ ತಮಾಷೆಗಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದಾಗಿ ಹೇಳಿದ್ದಾರೆ. ಇದನ್ನು ಮತ್ತೋರ್ವ ವಿದ್ಯಾರ್ಥಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸ್ಥಳೀಯರು ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ವಿದ್ಯಾರ್ಥಿಗಳು ತಾವು ಘೋಷಣೆ ಕೂಗಿರುವುದಕ್ಕೆ ಕ್ಷಮೆ ಕೇಳಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!