Friday, April 19, 2024
spot_imgspot_img
spot_imgspot_img

ಕಾಸರಗೋಡು: ಅಂಜುಶ್ರೀ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ; ರಾಸಾಯನಿಕ ತಪಾಸಣಾ ವರದಿಯಲ್ಲಿ ನಿಜಾಂಶ ಬಯಲು..!

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.

ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದೃಢೀಕರಿಸಿತ್ತು. ಜನವರಿ 7ರಂದು ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಕೋಝಿಕ್ಕೋಡ್ ನ ಫಾರೆನ್ಸಿಕ್‌ ಪ್ರಯೋಗಾಲಯದಲ್ಲಿ ನಡೆಸಿದ ತಪಾಸಣೆಯಿಂದ ಇಲಿ ವಿಷ ಸೇವನೆ ಅಂಜುಶ್ರೀ ಹಾನಿಗೆ ಕಾರಣ ಎಂದು ಖಚಿತ ಪಡಿಸಿದೆ. ಈ ಕುರಿತ ವರದಿ ತನಿಖಾ ತಂಡಕ್ಕೆ ಲಭಿಸಿದೆ.

ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್‌ಲೈನ್‌ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಕರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.

- Advertisement -

Related news

error: Content is protected !!