Thursday, May 2, 2024
spot_imgspot_img
spot_imgspot_img

ಕಾಸರಗೋಡು: ಕಾರಿನಲ್ಲಿ ಸ್ಪಿರಿಟ್ ಸಾಗಾಟ – ಓರ್ವ ಅರೆಸ್ಟ್

- Advertisement -G L Acharya panikkar
- Advertisement -

ಕಾಸರಗೋಡು: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಸಾವಿರ ಲೀಟರ್ ಸ್ಪಿರಿಟ್ ಅನ್ನು ಡಿವೈಎಸ್ಪಿ ವಿ.ವಿ ಮನೋಜ್ ನೇತೃತ್ವದ ತಂಡವು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಕುಂಜತ್ತೂರು ಅಣ್ಣಮಜಲಿನ ರವಿ ಕಿರಣ್ ( 31) ಎಂಬಾತನನ್ನು ಬಂಧಿಸಲಾಗಿದೆ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಜೇಶ್ವರ ಬಳಿ ಸ್ಕಾರ್ಫಿಯೋ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸ್ಪಿರಿಟ್ ಪತ್ತೆಯಾಗಿದೆ. ಇನ್ನು ಕ್ಯಾನ್‌ಗಳಲ್ಲಿ ತುಂಬಿಸಿ ಸ್ಪಿರಿಟನ್ನು ಸಾಗಿಸಲಾಗುತ್ತಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!