Friday, March 29, 2024
spot_imgspot_img
spot_imgspot_img

ಕಾಸರಗೋಡು: ದಂತ ವೈದ್ಯ ನಿಗೂಢ ಸಾವು ಪ್ರಕರಣ; ಐವರ ಬಂಧನ

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ.

ಈ ನಡುವೆ ಬದಿಯಡ್ಕ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಹರತಾಳ ಪೂರ್ಣವಾಗಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ವಿಶ್ವ ಹಿಂದೂ ಪರಿಷತ್ ನೇತತ್ವದಲ್ಲಿ ಬದಿಯಡ್ಕದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೃಷ್ಣ ಮೂರ್ತಿರವರ ಮೃತ ದೇಹವನ್ನು ಇಂದು ಮುಂಜಾನೆ ಬದಿಯಡ್ಕಕ್ಕೆ ತರಲಾಗಿತ್ತು. ಬಳಿಕ ಮನೆಯ ಹಿತ್ತಿಲಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮುಸ್ಲಿಂ ಲೀಗ್ ನೇತಾರರ ಸಹಿತ ಐವರ ಬಂಧನ

ಅಡಿಕೆ ವ್ಯಾಪಾರಿ ಹಾಗೂ ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್‌ ಕಾರ್ಯದರ್ಶಿ ಅಲಿ ತುಪ್ಪಕಲ್ಲು, ಮುಸ್ಲಿಂ ಲೀಗ್ ಬದಿಯಡ್ಕ ಪಂಚಾಯತು ಪದಾಧಿಕಾರಿ ಮುಹಮ್ಮದ್ ಹನೀಫ ಯಾನೆ ಅನ್ವರ್, ಕುಂಬ್ಡಾಜೆ ನಿವಾಸಿ ಅಶ್ರಫ್, ಅನ್ನಡ್ಕ ನಿವಾಸಿ ಮುಹಮ್ಮದ್ ಶಿಯಾಬುದ್ದೀನ್, ವಿದ್ಯಾಗಿರಿ ಮುನಿಯೂರು ನಿವಾಸಿ ಉಮರುಲ್ ಫಾರೂಕ್ ಬಂಧಿತರು ಅಲಿ ಹಾಗೂ ಅನ್ವರ್ ಬಂಧಿತ ಆರೋಪಿಗಳು.

ಮಂಗಳವಾರದಂದು ಕ್ಲಿನಿಕ್ ಗೆ ತೆರಳಿ ಇವರು ವೈದ್ಯರಿಗೆ ಬೆದರಿಕೆವೊಡ್ಡಿದ್ದರು. ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂಬ ಆರೋಪ ಘಟನೆಗೆ ಕಾರಣವಾಗಿತ್ತು. ಬೆದರಿಕೆ ಬಳಿಕ ಡಾ. ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ನಂತರ ಕುಂದಾಪುರದ ರೈಲು ಹಳಿಯಲ್ಲಿ ವೈದ್ಯರ ಮೃತದೇಹ ಪತ್ತೆಯಾಗಿತ್ತು.

ಈ ನಡುವೆ ಇದೊಂದು ವ್ಯವಸ್ಥಿತವಾದ ಷಡ್ಯಂತ್ರ, ಲವ್‌ ಜಿಹಾದ್‌ ಇನ್ನೂ ಅನೇಕ ರೀತಿಯಲ್ಲಿ ನಡೆಯುತ್ತಿರುವ ರೀತಿಯಲ್ಲೇ ಇದು ಕೂಡ ವ್ಯಾಪರ ಜಿಹಾದ್?‌ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಆರೋಪಿಗಳು ಬೆದರಿಸಿ ಡಾಕ್ಟರ್ ಕೈಯಿಂದ ಲಕ್ಷಗಟ್ಟಲೆ ಹಣ ಪಡೆಯಲು ಯೋಜನೆ ಹಾಕಿದ್ದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!