Sunday, April 28, 2024
spot_imgspot_img
spot_imgspot_img

ಕಾಸರಗೋಡು : ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು : ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ.

ಬಂದಡ್ಕ ಮಾಲಕುಂಡ ಇಲ್ಲತಿಂಗಲ್‌ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಕೆಲಸ ಮುಗಿಸಿ ತಾಯಿ ಸುಜಾತಾ ಸಂಜೆ ಮನೆಗೆ ಬಂದಾಗ ಶರಣ್ಯ ನಾಪತ್ತೆಯಾಗಿದ್ದು, ಕಿಟಕಿ ಮೂಲಕ ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ನೇಣು ಬಿಗಿದ ಸ್ಥಿತಿಯಲ್ಲಿ , ಮಂಚದಲ್ಲಿ ಕುಳಿತುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಕೋಣೆಯ ಬಾಗಿಲು ಮುಚ್ಚಿದ ಸ್ಥಿತಿಯಲ್ಲಿತ್ತು. ಕೂಡಲೇ ಅಕ್ಕಪಕ್ಕದವರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

- Advertisement -

Related news

error: Content is protected !!