Sunday, April 28, 2024
spot_imgspot_img
spot_imgspot_img

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಮಾಂಸಕ್ಕೆ ಮೂರು ತಿಂಗಳವರೆಗೆ ನಿಷೇಧ ಹೇರಲಾಗಿದೆ.

ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ, ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು, ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.

ಪೊಲೀಸ್, ಕಂದಾಯ, ಸ್ಥಳೀಯಾಡಳಿತ, ಮೋಟಾರು ವಾಹನ ಇಲಾಖೆ, ಆಗ್ನಿ ಶಾಮಕ ದಳ ಮೊದಲಾದವುಗಳ ನೆರವು ಪಡೆಯಲಾಗುವುದು. ಕಾಸರಗೋಡು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿರವರ ನೇತೃತ್ವದಲ್ಲಿ ತಂಡ ಕಾರ್ಯಾಚರಿಸಲಿದೆ.

- Advertisement -

Related news

error: Content is protected !!