Friday, June 5, 2026
spot_imgspot_img
spot_imgspot_img

ಕಾಸರಗೋಡು: ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

- Advertisement -
- Advertisement -

ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದ ಪರಿಣಾಮ 40ಕ್ಕೂ ಅಧಿಕಮಂದಿ ಗಾಯಗೊಂಡ ಘಟನೆ ನಡೆದಿದೆ.

ಗಾಯಗೊಂಡಿರುವ 20 ಮಂದಿಯನ್ನು ಪೂಡಂಕಲ್ಲು ತಾಲೂಕು ಆಸ್ಪತ್ರೆಗೆ ಹಾಗೂ 10ಮಂದಿಯನ್ನು ಕಾಞ೦ಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ 49 ಜನ ಸಿಬಂದಿ ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.

ಪನತ್ತಡಿ ಪೇಟೆಯಲ್ಲಿ ಬಸ್ಸು ಮಗುಚಿ ಬಿದ್ದ ಘಟನೆ ನಡೆದಿದ್ದು , ಈ ಸಂದರ್ಭದಲ್ಲಿ ಅದರಲ್ಲಿ ಸಿಲುಕಿದವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು. ಬೆಳಿಗ್ಗೆ ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

- Advertisement -

Related news

error: Content is protected !!