Friday, July 24, 2026
spot_imgspot_img
spot_imgspot_img

ಕಾಸರಗೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕರಿಬ್ಬರು ಗಂಭೀರ

- Advertisement -
- Advertisement -

ಕಾಸರಗೋಡು: ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ. ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!